ಭೀಕರ ಮಳೆ ಹಿನ್ನಲೆ : ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟರ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ

0

ಹೆಚ್ಚುವರಿ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಅಸ್ತು

ಹೆಚ್ಚಿನ ಸಂಖ್ಯೆಯ ಜನರು ಮಂಗಳೂರು- ಬೆಂಗಳೂರು ನಗರಗಳ ನಡುವೆ ನಿತ್ಯ ಪ್ರಯಾಣಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣದಿಂದ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯತೆಯಿದ್ದು. ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿನಂತಿಸಿದ್ದರು, ಈ ಹಿನ್ನೆಲೆಯಲ್ಲಿ ಹೆಚ್ಚುವರಿ ರೈಲು ಓಡಿಸುವ ಬಗ್ಗೆ ರೈಲ್ವೆ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ, ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಸಂಸದರ ಈ ಕಾರ್ಯದಿಂದ ಅನೇಕ ಜನರಿಗೆ ಪ್ರಯೋಜನವಾಗಲಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಶೇಷ ರೈಲುಗಳ ವಿವರ:

– ಜು. 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ.

– ಜು.20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ.

– ಜು.21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ.

– ಜು.21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ.