ಜುಲೈ 23 : ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

0


ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವ್ಯಾಪ್ತಿಯಲ್ಲಿ ಬರುವ ಸುಬ್ರಹ್ಮಣ್ಯ ಉಪ ವಿಭಾಗ ಹಾಗೂ ಸುಳ್ಯ ಉಪ ವಿಭಾಗ ದ ಮೆಸ್ಕಾಂ ಗ್ರಾಹಕರ ಜನ ಸಂಪರ್ಕ ಸಭೆಯು ಜುಲೈ 23 ರಂದು ಪೂರ್ವಾಹ್ನ 11 ಗಂಟೆಯಿಂದ 12 ಗಂಟೆಯವರೆಗೆ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವುದಾಗಿ ಸುಬ್ರಹ್ಮಣ್ಯ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ ಮಂಗಳೂರು ವೃತ್ತ ಅಧೀಕ್ಷಕ ಎಂಜಿನಿಯರ್ ಅಧ್ಯಕ್ಷತೆ ವಹಿಸಲಿದ್ದಾರೆ.