Home ನಿಧನ ಎ.ಎಸ್.ಐ.ಸುಂದರ ಕಾನಾವು ನಿಧನ

ಎ.ಎಸ್.ಐ.ಸುಂದರ ಕಾನಾವು ನಿಧನ

0

ಪೆರುವಾಜೆ ಗ್ರಾಮದ ಕಾನಾವು ನಿವಾಸಿ ಪುತ್ತೂರು ನಗರ ಠಾಣೆಯ ಎ.ಎಸ್.ಐ.ಸುಂದರ ಕಾನಾವು ಜು.22 ರಂದು ನಿಧನರಾದರು.


ಅವರಿಗೆ 45 ವರ್ಷ ಪ್ರಾಯವಾಗಿತ್ತು.
ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಮೃತರ ಪಾರ್ಥೀವ ಶರೀರ ಮಂಗಳೂರಿನಲ್ಲಿ ಇದೆ ಎಂದು ಕುಟುಂಬದ ಮೂಲದವರು ತಿಳಿಸಿದ್ದಾರೆ.


ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಪೊಲೀಸ್ ಸಹಾಯಕ ಉಪನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
ಮೃತರು ಪತ್ನಿ ಶ್ರೀಮತಿ ಲತಾ,ಪುತ್ರ ಮಯುಕ್ತ್ ಹಾಗೂ ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.

NO COMMENTS

error: Content is protected !!
Breaking