ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

0


ಕೆವಿಜಿ ಅಮರಜ್ಯೋತಿಯಲ್ಲಿ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅಥವಾ ಕಾರ್ಗಿಲ್ ವಿಜಯ ದಿನವನ್ನು ಆಚರಣೆ ಮಾಡಲಾಯಿತು.


ಕಾಲೇಜಿನ ಉಪನ್ಯಾಸಕಿಯಾದ ಶ್ರೀಮತಿ ಮಲ್ಲಿಕಾ ಎಂ ಎಲ್ ಮಾತನಾಡಿ
ಕಾರ್ಗಿಲ್ ಯುದ್ಧದ ಇತಿಹಾಸ ಮತ್ತು ಅದರ ರೋಚಕತೆ ಹಾಗೂ ಭಾರತೀಯ ಯೋಧರ ಬಲಿದಾನದ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತವಾಗಿ ವಿವರಿಸಿದರು.

ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಖಾಲಿದ ನೂಹ ಕ್ಯಾಪ್ಟನ್ ವಿಕ್ರಾಂತ್ ಬಾತ್ರರವರ ಬಗ್ಗೆ,
ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರತಿಜ್ಞಾ ಬಿ ಎಂ ಕ್ಯಾಪ್ಟನ್ ಮನೋಜ್ ಕುಮಾರ್ ಪಾಂಡೆರವರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.