ಕೆವಿಜಿ ಐಪಿಎಸ್ ನಲ್ಲಿ ಗಣಕಯಂತ್ರ(ಪೈಥಾನ್) ಭಾಷಾ ವಿಷಯದಲ್ಲಿ ಶಿಕ್ಷಕರಿಗಾಗಿ ಕಾರ್ಯಗಾರ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜು. 31 ರಂದು ಗಣಕಯಂತ್ರ ಭಾಷಾ ವಿಷಯದಲ್ಲಿ ಶಿಕ್ಷಕರ ಅಭಿವೃದ್ಧಿಗಾಗಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ ಶುಭ ಹಾರೈಸಿದರು. ತರಬೇತುದಾರರಾಗಿ ಕೆ.ವಿ.ಜಿ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ಆಗಮಿಸಿ ಶಿಕ್ಷಕರಿಗೆ ‘ ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಅವಶ್ಯಕತೆ ತುಂಬಾ ಇದೆ. ಅವುಗಳು ಬೆಳೆದಂತೆ ನಾವು ಬೆಳೆಯಬೇಕು. ಇದು ನಮ್ಮ ಬುದ್ಧಿವಂತಿಕೆ, ಸಂವಹನ ಮತ್ತು ಸ್ಪರ್ಧಾತ್ಮಕತೆಗೆ ಅತಿ ಅಗತ್ಯ. ಕಲಿಕೆ ಎನ್ನುವುದು ನಿರಂತರವಾದದು. ಅದಕ್ಕೆ ನಮ್ಮ ಸ್ವಯಂ ಪ್ರಯತ್ನ ಅಗತ್ಯ ‘ಎಂದು ತಿಳಿಸಿದರು.
ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಪ್ರೊ. ಅಭಿಜ್ಞ ಬಿ.ಬಿಯವರು ‘ಗಣಕಯಂತ್ರದ ಭಾಷಾ ಬೆಳವಣಿಗೆಯನ್ನು ಯಾವ ರೀತಿ ಮಾಡಬಹುದೆಂದು ಸಂಕ್ಷಿಪ್ತವಾಗಿ ಗಣಕಯಂತ್ರದ ಮೂಲಕ ಪ್ರಾಯೋಗಿಕವಾಗಿ ವಿವರಿಸಿದರು. ಕಾರ್ಯಕ್ರಮಕ್ಕೆ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಉಲ್ಲಾಸ್ ಮತ್ತು ರಕ್ಷಿತ್ ಸಹಕರಿಸಿದರು. ಶಾಲಾ ಶೈಕ್ಷಣಿಕ ಸಂಯೋಜನಾಧಿಕಾರಿ ರೇಣುಕಾ ಉತ್ತಪ್ಪ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಸ್ವಾಗತಿಸಿ, ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಭವ್ಯ ಸಿ.ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಕೆವಿಜಿ ಐಪಿಎಸ್ ನ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ಯಶೋಧ ರಾಮಚಂದ್ರ ಉಪ ಪ್ರಾಂಶುಪಾಲ ದೀಪಕ್ ವೈ.ಆರ್, ಕೆವಿಜಿ ಐಪಿಎಸ್ ನ ಶಿಕ್ಷಕರು ಮತ್ತು ಅಮರ ಜ್ಯೋತಿ ಪಿಯು ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.