ಪಂಜ: ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ ನಿವೃತ್ತಿ

0

ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ ರವರು ಜು.31 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಅವರು ಕೂತ್ಕುಂಜ ಗ್ರಾಮದ ಚಿದ್ಗಲ್ ಮನೆತನದ ಕೃಷ್ಣಪ್ಪ ಗೌಡ ಮತ್ತು ರುಕ್ಕಿಣಿ ದಂಪತಿಗಳ ಪುತ್ರ 1985 ಜು.9ರಂದು ದೈಹಿಕ ಶಿಕ್ಷಣ ಶಿಕ್ಷಕನಾಗಿ ಬೆಳ್ತಂಗಡಿ ಬಂಗಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ಪ್ರಾರಂಭ. 1990 ಸೆ.7 ರಿಂದ ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಕರ್ತವ್ಯಕ್ಕೆ ಹಾಜರಾಗಿ ಜು. 31 ರಂದು ನಿವೃತ್ತಿ ಹೊಂದಿದ್ದಾರೆ. ಒಟ್ಟು 39 ವರ್ಷ 22 ದಿನಗಳ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ.

ಪತ್ನಿ ಶ್ರೀಮತಿ ಕಮಲಾ ಕೆ ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಗ ಅಂಕಿತ್ ಸಿ, ಮುಂಬೈಯ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (IIT Mumbai.) ಮಾಸ್ಟರ್ ಆಫ್ ಡಿಸೈನ್ (M DES) ಸ್ನಾತಕೋತ್ತರ ಪದವಿ ಪಡೆದು ಪ್ರಸ್ತುತ ಬೆಂಗಳೂರಿನಲ್ಲಿ ಲಾರ್ಸೆನ್ ಆಂಡ್ ಟೂಬೊ ಕಂಪನಿಯಲ್ಲಿ ಸೀನಿಯರ್ ಡಿಸೈನರ್ ಉದ್ಯೋಗಿ.
ಮಗಳು ಅಕ್ಷತಾ ಸಿ ಸಹ್ಯಾದಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಬೆಂಗಳೂರಿನಲ್ಲಿ ಟಾಟಾ ಕನ್ನಲೈನಿ ಸರ್ವಿಸಸ್ ನಲ್ಲಿ ಉದ್ಯೋಗಿ.

ಯೋಗೀಶ್ ಚಿದ್ಗಲ್ ರವರು ಉತ್ತಮ ಕ್ರೀಡಾಪಟುವಾಗಿದ್ದು ಅನೇಕ ಪ್ರಶಸ್ತಿ ಪಡೆದಿದ್ದಾರೆ.ಕಂಬಳದ ಕೋಣಗಳನ್ನು ಓಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ 3 ಬಾರಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರಿಂದ ತರಬೇತಿ ಪಡೆದ ಅನೇಕ ವಿದ್ಯಾರ್ಥಿಗಳಿಗೆ ಜಿಲ್ಲೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದ ಕೀರ್ತಿ ಇದೆ. ಉತ್ತಮ ಕ್ರೀಡಾ ಸಂಘಟಕರು ಅನೇಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ:ಜಿಲ್ಲೆ, ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಪಂದ್ಯಾಟಗಳಲ್ಲಿ ಮುಖ್ಯ ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷನಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.2022- 2023 ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ

ಸಂಸ್ಥೆಯಲ್ಲಿ 400 ಮೀಟರ್ ಸ್ಟಾಂಡರ್ಡ್ ಟ್ರಾಕ್ ಗಳನ್ನೊಳಗೊಂಡ ಸುಸಜ್ಜಿತವಾದ ಕೋಟಿ ಚೆನ್ನಯ ಕ್ರೀಡಾಂಗಣ ನಿರ್ಮಾಣಕ್ಕೆ ಬಹಳಷ್ಟು ಸೇವೆ ಸಲ್ಲಿಸಿದ್ದಾರೆ.