ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಯು.ಬಿ. ಚಕ್ರಪಾಣಿ ಅವರಿಗೆ ಗೌರವ

0

ಸುಳ್ಯ ತಾಲೂಕು ಮಟ್ಟದ ಗ್ರಾಮೀಣ ಪ್ರದೇಶದ ಅತ್ಯುತ್ತಮ ಡೀಲರ್ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ 2023 -24ನೇ ಸಾಲಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಮಾರಾಟದಲ್ಲಿ ಸುಳ್ಯ ತಾಲೂಕು ಮಟ್ಟದ ಗ್ರಾಮೀಣ ಪ್ರದೇಶದ ಅತ್ಯುತ್ತಮ ಡೀಲರ್ ಆಗಿ ಸಂಪಾಜೆ ವರ್ತಕರ ಸಂಘದ ಅಧ್ಯಕ್ಷ ಯು.ಬಿ. ಚಕ್ರಪಾಣಿ ಅವರನ್ನು ಗುರುತಿಸಿ, ಗೌರವಿಸಲಾಗಿದೆ.

ಆ.1ರಂದು ಸುಳ್ಯದಲ್ಲಿ ನಡೆದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ದ‌.ಕ‌. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ನವಮಿ ಸ್ಟೋರ್ ಮಾಲಕರಾದ ಯು.ಬಿ. ಚಕ್ರಪಾಣಿ ಅವರಿಗೆ ಸುಳ್ಯ ತಾಲೂಕು ಮಟ್ಟದ ಗ್ರಾಮೀಣ ಪ್ರದೇಶದ ಅತ್ಯುತ್ತಮ ಡೀಲರ್ ಆಗಿ ದ್ವಿತೀಯ ಸ್ಥಾನವನ್ನು ನೀಡಿ ಗೌರವಿಸಲಾಯಿತು.