ಬೈದರಕೊಳಂಜಿಯಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಗೆ ಮನವಿ ಸಲ್ಲಿಸಲು ನಿರ್ಧಾರ
ಮಳೆಗಾಲದ ಮುಂಜಾಗ್ರತಾ ಕ್ರಮಗಳ ಕುರಿತು ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸಭೆಯು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆ.2ರಂದು ನಡೆಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಪಾಯಕಾರಿ ಮರಗಳ ತೆರವುಗೊಳಿಸುವಂತೆ ಪುತ್ತೂರು ವಲಯ ಅರಣ್ಯ ಇಲಾಖೆಯ ಕಛೇರಿಗೆ ಪತ್ರ ಬರೆಯುವುದಾಗಿ ತೀರ್ಮಾನಿಸಲಾಯಿತು.
ಜಾಲ್ಸೂರಿನ ಬೈದರಕೊಳಂಜಿಯಲ್ಲಿ ಪರಿಶಿಷ್ಟ ಪಂಗಡದವರ ಮನೆಗಳಿದ್ದು, ಆ ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕಾಗಿ ಗ್ರಾ.ಪಂ. ಆಡಳಿತ ಮಂಡಳಿಯ ನಿಯೋಗವು ಆ.,5ರಂದು ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜೊತೆಗೆ ಡೆಂಗ್ಯೂ ಜ್ವರದ ಕುರಿತು ಮಳೆಗಾಲದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ, ಗ್ರಾಮ ಆಡಳಿತಾಧಿಕಾರಿ ಶಾಹಿನಾ, ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಸದಸ್ಯರುಗಳಾದ ಎನ್.ಎಂ. ಸತೀಶ್ ಕೆಮನಬಳ್ಳಿ, ಕೆ.ಎಂ. ಬಾಬು ಕದಿಕಡ್ಕ, ಪಿ.ಆರ್. ಸಂದೀಪ್ ಕದಿಕಡ್ಕ, ಅಬ್ದುಲ್ ಮಜೀದ್ ನಡುವಡ್ಕ, ಪೊಲೀಸ್ ಠಾಣಾ ಎ.ಎಸ್.ಐ. ತಾರನಾಥ, ಆರೋಗ್ಯ ಇಲಾಖೆಯ ಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.