ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದ
ಮರ್ವತ್ತಡ್ಕ ದವರೆಗೆ ಆ.04 ರಂದು ನಡೆಯಿತು.


ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಊರಿನ ಪ್ರಮುಖರು ಹಾಗೂ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗದ NSS ವಿದ್ಯಾರ್ಥಿ ಘಟಕದ ವಿದ್ಯಾರ್ಥಿಗಳಾದ ರಾಜೇಶ್ ಪಿ.ಕೆ,ಭವಿಷ್ ಎಂ.ಎಸ್,ಗೌತಮ್ .ಎಂ.ಹೆಚ್ , ಧನುಷ್.ಬಿ ಮತ್ತು ನೂತನ್ ಜಿ .ಪಿ ಇವರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.