ಡಾ. ಕುರುಂಜಿಯವರ 11ನೇ ಪುಣ್ಯತಿಥಿ, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪುಷ್ಪ ನಮನ

0

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 11ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ಪುಷ್ಪನಮನ ಕಾರ್ಯಕ್ರಮವು ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್‌ನಲ್ಲಿ ಆಗಸ್ಟ್ 07ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಕೌಂನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆಯವರು ಕೆವಿಜಿಯವರಿಗೆ ನುಡಿನಮನ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಎಡ್ವೈಸರ್ ಪ್ರೊ. ದಾಮೋದರ ಗೌಡ ಕೆವಿಜಿಯವರ ಭಾವಚಿತ್ರಕ್ಕೆ ದೀಪಬೆಳಗಿಸಿ ಪುಷ್ಪನಮನ ಸಲ್ಲಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ್ ಡಿ. ವಿ. ಯವರು ಡಾ. ಕುರುಂಜಿ ವೆಂಕಟ್ರಮಣ ಗೌಡರ ತತ್ವ ಆದರ್ಶಗಳನ್ನು ತಿಳಿಸಿ, ಸ್ವಾಗತಿಸಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಡಾ. ಕುರುಂಜಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.