ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0


ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢಶಾಲೆ ಏನೇಕಲ್ಲು ನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಭಿರಾಮ್ 10ನೇ ದ್ವಿತೀಯ ಸ್ಥಾನ, ಧನ್ವಿ ಯು.ಸಿ 9ನೇ ಚತುರ್ಥ ಸ್ಥಾನ, ಇಶಾನ್ 9ನೇ ಪಂಚಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ ಸಹಕರಿಸಿದರು.