ಪ್ರತೀ ಗ್ರಾಮದಲ್ಲಿಯೂ ಮಹಿಳಾ ಗ್ರಾಮ ಸಮಿತಿ ರಚನೆಗೆ ನಿರ್ಧಾರ
ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಪ್ರಥಮ ಸಭೆಯು ಆ.7ರಂದು ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಘಟಕದ ಅಧ್ಯಕ್ಷೆ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕೊಡಿಯಾಲಬೈಲು ಎಂ.ಜಿ.ಎಂ. ಶಾಲೆಗೆ ಊಟದ ತಟ್ಟೆ ಖರೀದಿಗೆ ರೂ.5000 ದೇಣಿಗೆಯನ್ನು ಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ರಿಗೆ ಹಸ್ತಾಂತರ ಮಾಡಲಾಯಿತು.
ಗ್ರಾಮ ಗ್ರಾಮಗಳಲ್ಲಿ ಮಹಿಳಾ ಗೌಡ ಸಮಿತಿಯನ್ನು ರಚಿಸುವ ಕುರಿತು ಸಮಾಲೋಚನೆ ನಡೆಯಿತು. ಆ.20ರಂದು ಅಜ್ಜಾವರ ಗ್ರಾಮ ಸಮಿತಿ ಸಭೆ ನಡೆಸುವ ಕುರಿತು ತೀರ್ಮಾನಿಸಲಾಯಿತು.
ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಮಹಿಳಾ ಘಟಕದ ಸ್ಥಾಪಕಾಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಪ್ರಧಾನ ಕಾರ್ಯದರ್ಶಿ ಸವಿತಾ ಸಂದೇಶ್, ಕೋಶಾಧಿಕಾರಿ ಜಯಶ್ರೀ ರಾಮಚಂದ್ರ ಪಲ್ಲತಡ್ಕ ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಅಧ್ಯಕ್ಷೆ ವಿನುತಾ ಪಾತಿಕಲ್ಲು ಸ್ವಾಗತಿಸಿದರು. ಕಾರ್ಯದರ್ಶಿ ಸವಿತಾ ಸಂದೇಶ್ ವಂದಿಸಿದರು.