ಗುತ್ತಿಗಾರು : ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಸುವ ಬಗ್ಗೆ ಪೂರ್ವಭಾವಿ ಸಭೆ

0


ಪಿಎಂಶಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಗುತ್ತಿಗಾರು ಇಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವು ಸೆ. ೨೦ರಂದು ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಆ. ೧೦ರಂದು ಶಾಲೆಯಲ್ಲಿ ನಡೆಯಿತು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎಸ್ ಡಿ ಎಂ ಸಿ ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಕ್ರೀಡಾಕೂಟ ಸಾಂಗವಾಗಿ ನಡೆಯುವಂತೆ ಪೂರಕವಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ರಾಷ್ಟ್ರೀಯ ಕಬ್ಬಡಿ ತರಬೇತುದಾರ ಬಿ.ಕೆ. ಮಾಧವರವರು ಕ್ರೀಡಾಕೂಟ ನಡೆಸುವ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರ ಮೂಕಮಲೆ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಮಾವತಿ ಸ್ವಾಗತಿಸಿ, ವಂದಿಸಿದರು. (ಚಿತ್ರ, ವರದಿ: ಡಿ.ಹೆಚ್.)