ತಾಲೂಕು ಜಿ.ಪಿ.ಟಿ. ಶಿಕ್ಷಕರ ಸಂಘದ ಸ್ನೇಹ ಸಮ್ಮಿಲನ

0

ಸುಳ್ಯ ತಾಲೂಕು (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ(ರಿ) ವತಿಯಿಂದ ತಾಲೂಕು ಜಿ ಪಿ ಟಿ ಶಿಕ್ಷಕರ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸುಳ್ಯದ ಸಂಧ್ಯಾ ರಶ್ಮಿ ಸಭಾಭವನದಲ್ಲಿ ಆ.10 ನಡೆಯಿತು .


ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಜಿಪಿಟಿ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಎ ಎಂ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್ ಭಾಗವಹಿಸಿ ಶುಭ ಹಾರೈಸಿದರು .ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ಕುಮಾರ್ ವೃಂದ ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆ ಮತ್ತು ನಿಲುವುಗಳು ಮತ್ತು ಶಿಕ್ಷಕರ ಜವಾಬ್ದಾರಿಗಳ ಬಗ್ಗೆ ತಾಲೂಕಿನ ಜಿಪಿಟಿ ಶಿಕ್ಷಕರ ಜೊತೆ ಸಂವಾದ ನಡೆಸಿದರು.


ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಆಶಾ ಅಂಬೆಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು .
2023 ರಲ್ಲಿ ತಾಲೂಕಿಗೆ ನೂತನವಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಅಧಿಕೃತವಾಗಿ ಸಂಘಕ್ಕೆ ಸೇರಿಸಿಕೊಳ್ಳುವುದರ ಮೂಲಕ ನೂತನ ಶಿಕ್ಷಕರಿಗೆ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .


ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಪ್ರಾರ್ಥಿಸಿ ,ಶ್ರೀಮತಿ ಆಶಾ ಅಂಬೆಕಲ್ಲು ಸ್ವಾಗತಿಸಿದರು.ಶಿಕ್ಷಕ ರಮೇಶ್ ವಂದಿಸಿ ,ಶಿಕ್ಷಕ ಆನಂದ ವೈ ಈ ಕಾರ್ಯಕ್ರಮವನ್ನು ನಿರೂಪಿಸಿದರು.