ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನಕ್ಕೆ ಧ್ವನಿವರ್ಧಕ ಕೊಡುಗೆ

0

ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮತ್ತು ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನಕ್ಕೆ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಿದರು.
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ, ಜನಜಾಗೃತಿ ವೇದಿಕೆ ಅಧ್ಯಕ್ಷ ಲೋಕನಾಥ ಅಮೆಚೂರು, ವಲಯಾಧ್ಯಕ್ಷ ಆನಂದ ಗೌಡ ಪೆರಿಯಾನರವರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತುರವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿರಾಟ್ ಫ್ರೆಂಡ್ಸ್ ಗೌರವಾಧ್ಯಕ್ಷ ಮಿಥುನ್ ಶೆಣೈ, ಗ್ರಾ.ಯೊಜನೆಯ ಬೆಳ್ಳಾರೆ ಮೇಲ್ವಿಚಾರಕಿ ಶ್ರೀಮತಿ ವಿಶಾಲ ಹಾಗೂ ಮತ್ತಿತರರು ಉಪಸ್ಥಿತರಿದ್ದರು.