ಅರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಸರ್ಕಾರದ ಆದೇಶ ಪ್ರಕಾರ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದ ಪ್ರತಿಜ್ಞೆ ಕಾರ್ಯಕ್ರಮವು ಆ.12ರಂದು ನಡೆಯಿತು.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಅವರು ಕಾರ್ಯಕ್ರಮದ ಮಹತ್ವವನ್ನು ತಿಳಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಎಂ.ಕೆ. ಉಪಸ್ಥಿತರಿದ್ದರು.
ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ 700 ಮಂದಿ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕಾಲೇಜಿನ ಎನ್.ಎಸ್.ಎಸ್.
ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ.ಸ್ಕೌಟ್ ಶಿಕ್ಷಕ ಮನೋಜ್ ಸಹಕರಿಸಿದರು.