ನಶಾ ಮುಕ್ತ ಭಾರತ ಅಭಿಯಾನದ ಆಂದೋಲನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸ್ವಾಗತವನ್ನ ಕೋರಿ, ಕಾರ್ಯಕ್ರಮದ ಉದ್ದೇಶವನ್ನು ಕಾಲೇಜಿನ ಕನ್ನಡ ಉಪನ್ಯಾಸಕಿ ಕವಿತಾ ಎಂ ಕೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿಧಿ ವಿಧಾನವನ್ನು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮನಸ್ವಿ ನೆರವೇರಿಸಿ ಕೊಟ್ಟರು.
ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.