ವಯೋವೃದ್ಧರೊಬ್ಬರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ದಂಡೆಕಜೆಯಲ್ಲಿ ಆ.13ರಂದು ಬೆಳಿಗ್ಗೆ ಸಂಭವಿಸಿದೆ.
ಕಲ್ಲುಗುಂಡಿ ದಂಡಕಜೆ ನಿವಾಸಿ ಲಾರೆನ್ಸ್ ಅವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಗೆ 70 ವರ್ಷ ವಯಸ್ಸಾಗಿತ್ತು.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೃತರು ಪತ್ನಿ ಹಾಗೂ ಮೂರು ಮಂದಿ ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.