ಸುಳ್ಯ ಎನ್.ಎಂ.ಸಿ.ಯಲ್ಲಿ ಆಟಿ ಕೂಟದ ವೈಭವ

0

ಸುಳ್ಯ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಇಂದು ವಿಶಿಷ್ಟ ರೀತಿಯಲ್ಲಿ ಆಟಿ ಕೂಟವನ್ನು ಏರ್ಪಸಿದ್ದರು.

ವಿದ್ಯಾರ್ಥಿ/ ವಿದ್ಯಾರ್ಥಿನಿಯರು ತಮ್ಮ ಮನೆಗಳಲ್ಲಿ ಆಟಿ ತಿನಿಸುಗಳನ್ನು ತಯಾರಿಸಿ ತಂದಿದ್ದರಲ್ಲದೆ, ಅವುಗಳನ್ನು ಒಪ್ಪ ಓರಣವಾಗಿ ಜೋಡಿಸಿ ಕಾಲೇಜು ಅಧ್ಯಾಪಕ ವೃಂದ ಹಾಗೂ ಆಡಳಿತ ವರ್ಗಕ್ಕೆ ತಿನಿಸುಗಳನ್ನು ಪರಿಚಯ ಮಾಡಿಕೊಟ್ಟರು. ವಿವಿಧ ರೀತಿಯ ಸೊಪ್ಪು ಸದೆಗಳನ್ನು ಇರಿಸಿ ಅದರ ಔಷಧೀಯ ಮೌಲ್ಯಗಳ ಬಗ್ಗೆ ವಿವರಿಸಿದರು.

ಆಟಿ ತಿಂಗಳ ಚೆನ್ನಮಣೆ ಮತ್ತು ಇತರ ಆಟಗಳನ್ನು ಏರ್ಪಸಿದ್ದರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾರ್ಯದರ್ಶಿ ಕೆ.ವಿ. ಹೇಮನಾಥ, ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಪ್ರಾಂಶುಪಾಲೆ ಮಿಥಾಲಿ ಪಿ. ರೈ , ಎನ್.ಎಂ.ಸಿ. ಪ್ರಾಂಶುಪಾಲ ಡಾ. ಎಮ್.ಎಮ್. ರುದ್ರಕುಮಾರ್ ಮತ್ತು ಅಧ್ಯಾಪಕ ವರ್ಗದವರು ವಿದ್ಯಾರ್ಥಿಗಳ ಆಟಿ ಪ್ರದರ್ಶನವನ್ನು ವೀಕ್ಷಿಸಿದರು. ಅತ್ಯುತ್ತಮ ಪ್ರದರ್ಶನ ಮಾಡಿದವರಿಗೆ ಪ್ರಶಸ್ತಿಯನ್ನು ನೀಡಲಾಯಿತು. ವಿದ್ಯಾರ್ಥಿಯೊಬ್ಬ ತುಳುನಾಡಿನ ಆಚರಣೆಗಳ ಬಗ್ಗೆ ವಿವರಣೆ ನೀಡುತ್ತಿದ್ದುದು ಆಕರ್ಷಕವಾಗಿತ್ತು.