ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಸಹಕಾರ ಕ್ಷೇತ್ರದಲ್ಲಿ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿಯನ್ನು ಸಹಕಾರ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಪ್ರಧಾನ ಮಾಡಿದರು.















ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ ಪ್ರಶಸ್ತಿ ಸನ್ಮಾನ ಸ್ವೀಕರಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್ ಮನ್ಮಥ, ಸಂಘದ ನಿರ್ದೇಶಕರುಗಳಾದ ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಜಯಪ್ರಕಾಶ್ ಮೊಗ್ರ, ನವೀನ್ ಬಾಳುಗೋಡು ಮತ್ತಿತರರು ಉಪಸ್ಥಿತರಿದ್ದರು.









