ಮಂಡೆಕೋಲು ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

0

ಆ.14ರಂದು ಮಂಗಳೂರಿನಲ್ಲಿ ನಡೆದ ದ ಕ ಜಿಲ್ಲಾ ಸಹಕಾರ ಸಂಘದ ಮಹಾಸಭೆಯಲ್ಲಿ ಮಂಡೆಕೋಲು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಗೌರವಿಸಿದರು.

ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರು ಈ ಸಂದರ್ಭದಲ್ಲಿ ಇದ್ದರು.