ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಬಹುಮಾನ

0

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅತ್ಯುತ್ತಮ ಕಾರ್ಯವೈಖರಿ ಹಾಗೂ ಸರ್ವಾಂಗಿಣ ಅಭಿವೃದ್ಧಿಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರದೊಂದಿಗೆ 10 ಸಾವಿರ ರೂ. ಮೌಲ್ಯದ ಬ್ಯಾಂಕಿನ ಪಾಲು ಬಂಡವಾಳ ನೀಡಿ ಗೌರವಿಸಿದೆ.
ಈ ಸಂದರ್ಭ ಸಂಘದ ಆಡಳಿತ ಮಂಡಲಿಯ ನಿರ್ದೇರ್ಶಕರು ಹಾಗೂ ಹಾಲು ಸೊಸೈಟಿಯ ನಿರ್ದೇಶಕರು ಉಪಸ್ಥಿತರಿದ್ದರು.