ಜಾಲ್ಸೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಜಾಲ್ಸೂರು ಗ್ರಾಮ ಪಂಚಾಯತಿ ವಠಾರದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಗ್ರಾ.ಪಂ.‌ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಕಾರ್ಯದರ್ಶಿ ಸುಂದರ, ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಸದಸ್ಯರುಗಳಾದ ಕೆ.ಎಂ.ಬಾಬು ಕದಿಕಡ್ಕ, ಎನ್.ಎಂ. ಸತೀಶ ಕೆಮನಬಳ್ಳಿ, ಪಿ.ಆರ್. ಸಂದೀಪ್ ಕದಿಕಡ್ಕ, ಶ್ರೀಮತಿ ಲೀಲಾವತಿ ವಿನೋಬನಗರ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ವಿಜಯ ಅಡ್ಕಾರು, ಶಿವಪ್ರಸಾದ್ ನೀರಬಸಿರು, ಶ್ರೀಮತಿ ಅಂಬಿಕಾ ಕುಕ್ಕಂದೂರು, ಮಾಜಿ ಗ್ರಾ.ಪಂ. ಉಪಾಧ್ಯಕ್ಷ ದಿನೇಶ್ ಅಡ್ಕಾರು , ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಚಿತ್ರ , ಗ್ರಾ.ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.