ಅನ್ಸಾರಿಯಾ ಎಜ್ಯುಕೇಶನ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವದ ಆಝಾದಿ ಅಸೆಂಬ್ಲಿ

0

ಧಾರ್ಮಿಕ ಮತ್ತು ಲೌಕಿಕ ಸಮನ್ವಯ ವಿಧ್ಯಾಭ್ಯಾಸ ಕೇಂದ್ರ ಅನ್ಸಾರಿಯಾ ಎಜುಕೇಷನ್ ಸೆಂಟರ್ ನಲ್ಲಿ ಭವ್ಯ ಭಾರತದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅದ್ದೂರಿಯಾಗಿ ನಡೆಯಿತು.


ಸಂಸ್ಥೆಯ ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಪಟೇಲ್ ಧ್ವಜಾರೋಹಣಗೈದರು.

ಉಪಾಧ್ಯಕ್ಷರಾದ ಎಸ್ ಪಿ ಅಬೂಬಕ್ಕರ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ನಿರ್ದೇಶಕರಾದ ಕೆ ಎಸ್ ಉಮ್ಮರ್, ಗ್ರೀನ್ ವ್ಯೂವ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಮುಹಮ್ಮದ್ ಇಲ್ಯಾಸ್, ಹಾಫಿಲ್ ಅಫೀಝ್ ಮುಈನಿ, ಪಿ.ಕೆ ಜಾಬಿರ್ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಹರ್ಲಡ್ಕ, ಅನ್ಸಾರುಲ್ ಮುಸ್ಲಿಮೀನ್ ಅಧ್ಯಕ್ಷರಾದ ಅಬ್ದುಲ್ಲಾ ಹಾಜಿ ಕಟ್ಟೆಕ್ಕಾರ್ಸ್, ಕಾರ್ಯದರ್ಶಿಗಳಾದ ಅಬ್ದುಲ್ ಕಲಾಂ ಬೀಜಕೊಚ್ಚಿ , ನಿರ್ದೇಶಕರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ , ಕೆ ಹಸನ್ ಹಾಜಿ, ಅಬ್ದುಲ್ ಕಲಾಂ ಕಟ್ಟೆಕ್ಕಾರ್ಸ್, ಉಮ್ಮರ್ ಕೋಲ್ಚಾರ್, ಸಿದ್ದೀಕ್ ಕಟ್ಟೆಕ್ಕಾರ್ಸ್ ಸಲಹಾ ಸಮಿತಿ ಸದಸ್ಯರಾದ ಇಕ್ಬಾಲ್ ಎಲಿಮಲೆ, ಅಬ್ದುಲ್ ಶುಕೂರ್ ಹಾಜಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಸ್ಪರ್ಧಾ ಕಾರ್ಯಕ್ರಮದ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಅಧ್ಯಾಪಕರು,ಹಿತೈಷಿಗಳು, ಪೋಷಕರು, ದಅವಾ ಕಾಲೇಜು, ಮದ್ರಸಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಯ್ಯೂಬ್ ಸ್ವಾಗತಿಸಿ ಅಧ್ಯಾಪಕರಾದ ಅಡ್ವೊಕೇಟ್ ಅಬ್ದುಲ್ಲಾ ಹಿಮಮಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.