ಅರಂತೋಡು ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ

0

ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಸ್ವತಂತ್ರ ಭಾರತದ 78ನೇ ಸ್ವಾತಂತ್ರ್ಯ ಆಚರಣೆ ಅಂಗವಾಗಿ ಹರ್ ಘರ್ ತಿರಂಗ ಎಂಬ ಘೋಷವಾಕ್ಯದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವು ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಧ್ವಜಾರಣವನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತಿನ ಸರ್ವ ಸದಸ್ಯರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ಆಶಾ ಕಾರ್ಯಕರ್ತರು, ಶಾಲಾ ಅಧ್ಯಾಪಕ ವೃಂದದವರು , ವಿವಿಧ ಇಲಾಖಾಧಿಕಾರಿಗಳು ಗ್ರಾಮಸ್ಥರ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಿಹಿ ತಿಂಡಿಯನ್ನು ಪ್ರಯೋಜಕರಾಗಿ ದಿನೇಶ್ ಗುತ್ತಿಗೆದಾರರು ತಿಲಕ್ ರಾಜ್ ಒದಗಿಸಿದರು.