ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

0


ದೇಶದಲ್ಲಿ ಪ್ರಗತಿ ಕಾಣಬೇಕಾದರೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನವನ್ನು ಮೂಡಿಸಬೇಕು ಎಂದು ಪ್ರಾಧ್ಯಾಪಕರಿಗೆ ಕರೆ
– ಡಾ. ಉಜ್ವಲ್ ಯು.ಜೆ.


ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು
ಡಾ. ಉಜ್ವಲ್ ಯು.ಜೆ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪ್ರಗತಿ ಕಾಣಬೇಕಾದರೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನವನ್ನು ಮೂಡಿಸಬೇಕು ಎಂದು ಪ್ರಾಧ್ಯಾಪಕರಿಗೆ ಕರೆ ನೀಡುತ್ತಾ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ಕೋರಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ ಅವರು ಯುವಜನತೆ, ಸತ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ದೇಶಭಕ್ತಿಯನ್ನು ಮೈಗೂಡಿಸಿಕೊಂಡು ದೇಶದ ಸಮಗ್ರ ಅಭಿವೃದ್ಧಿಗೆ ಕಾರಣೀಭೂತರಾಗಬೇಕೆಂದು ಕರೆ ನೀಡುತ್ತಾ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ಕೋರಿದರು. ವಿದ್ಯಾರ್ಥಿಗಳಾದ ತ್ರಿಶಾಲಿ ಮತ್ತು ಹವ್ಯ ಹಾಗೂ ಸಾಂಸ್ಕೃತಿಕ ಸಂಯೋಜಕರಾದ ಪ್ರೊ. ಕೃಷ್ಣರಾಜ್ ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಧ್ವಜ ವಂದನೆಯನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ
ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ., ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.