ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ ಎಲ್.ರೈ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಪದ್ಮನಾಭ ಬೀಡು, ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಅಪ್ಸ ಬಿ.ಯು, ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ.ಸ್ವಾಗತಿಸಿದರು.