ಸಂಪಾಜೆ ಗ್ರಾಮ ಪಂಚಾಯತಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಸಂಪಾಜೆ ಗ್ರಾಮ ಪಂಚಾಯತಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ನಡೆಸಲಾಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿರವರು ಧ್ವಜರೋಹಣ ನೆರವೆರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಪಂಚಾಯತ್ ಸರ್ವಸದಸ್ಯರು, ಕಾರ್ಯದರ್ಶಿ/ಸಿಬ್ಬಂದಿ ವರ್ಗ, ಸಹಕಾರಿ ಸಂಘದ ನಿರ್ದೇಶಕರು, ವಸತಿ ನಿಲಯದ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.