ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 78ನೆಯ ಸ್ವಾತಂತ್ರ್ಯೋತ್ಸವವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ರುಕ್ಮಯ್ಯದಾಸ್ ಅವರು ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರವಾಗಿದ್ದು 78ನೇ ವರ್ಷಕ್ಕೆ ಮುಂದಡಿ ಇಡುತ್ತಿರುವ ಸಂದರ್ಭದಲ್ಲಿ ಅಭಿವೃದ್ಧಿಶೀಲ ರಾಷ್ಟ್ರದತ್ತ ಹೆಜ್ಜೆ ಇಡುತ್ತಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ಕಿಶೋರ್ ಕುಮಾರ್ ಅವರು ಶುಭಹಾರೈ ಸಿದರು.
ರಕ್ಷಕ – ಶಿಕ್ಷಕ ಸಂಘದ ಸದಸ್ಯರಾದ ಶ್ರೀಯುತ ಅಬುಸಾಲಿಯವರು ಎಲ್ಲಾ ವಿದ್ಯಾರ್ಥಿಗಳು ಹಿರಿಯರಿಗೆ ಗೌರವ ನೀಡಿ ನಮ್ಮ ನೆಲದ ಸಂಸ್ಕೃತಿ ಮೌಲ್ಯಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎನ್ನುವ ಸಂದೇಶವನ್ನು ಸಾರಿದರು.
ವಿದ್ಯಾರ್ಥಿಗಳಿಂದ ಆಯೋಜಿಲ್ಪಟ್ಟ ವಿವಿಧ ರಾಷ್ಟ್ರ ನಾಯಕರುಗಳ ಛದ್ಮವೇಷವು ಕಾರ್ಯಕ್ರಮಕ್ಕೆ ಮೆರುಗು ನೀಡಿತ್ತು. ದೇಶಭಕ್ತಿ ಗೀತೆ, ಸಾಮೂಹಿಕ ನೃತ್ಯಗಳು ನೆರೆದಿರುವವರ ದೇಶಭಕ್ತಿಯನ್ನು ಉತ್ತೇಜಿಸುವಂತಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ನಿರ್ದೇಶಕರಾದ ಶ್ರೀಮತಿ ಲೀಲಾವತಿ ರುಕ್ಮಯ್ಯದಾಸ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ ಪೋಷಕವೃಂದದವರಿಂದ ಶ್ರೀಯುತ ಡಾ| ಕಿಶೋರ್ ಕುಮಾರ್ ಅವರಿಗೆ ಡಾಕ್ಟರೇಟ್ ಪಡೆದ ನಿಮಿತ್ತ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ ಕಾರ್ಯಕ್ರಮದ ಸಲುವಾಗಿ ವಿದ್ಯಾರ್ಥಿಗಳ ಮನರಂಜನೆಗಾಗಿ ಹೊರಸಂಚಾರವನ್ನು ಹಮ್ಮಿಕೊಂಡು ಶಾಲಾ ವಾಹನದಲ್ಲಿ ಕರೆದೊಯ್ಯಲಾಯಿತು. ಕಾರ್ಯಕ್ರಮವನ್ನು ಶ್ರೀಮತಿ ಸರಿನಾ ಫಾತಿಮಾ ನಿರೂಪಿಸಿ ಧನ್ಯವಾದಗೈದರು.