ಕೊಡಗು ಚೆಂಬು ಗ್ರಾಮದ ಸ.ಹಿ.ಪ್ರಾ.ಶಾಲೆ ಊರುಬೈಲು ಶಾಲೆಯಲ್ಲಿ78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.















ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಹೇಶ ಇವರು ನೆರವೇರಿಸಿದರು. ವಿದ್ಯಾರ್ಥಿಗಳು ಮೆರವಣಿಗೆಯ ನಂತರ ಸಭಾ ಕಾರ್ಯಕ್ರಮ ಜರುಗಿತು. ಸಭಾ ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಅಧ್ಯಕ್ಷತೆಯನ್ನು ವಹಿಸಿ, ಉಪಾಧ್ಯಕ್ಷರಾದ ಶ್ರೀಮತಿ ನಮಿತಾ, ಸದಸ್ಯರಾದ ನಿತ್ಯಾನಂದ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕರಾದ ಸೋಮಣ್ಣ ಕೆ ಆರ್ ಸ್ವಾಗತಿಸಿ ವಂದಿಸಿದರು.
ಶಾಲೆ ಮತ್ತು ಚೆಂಬು ಗ್ರಾ.ಪಂಚಾಯಿತಿ ವತಿಯಿಂದ ಸಿಹಿ ವಿತರಿಸಲಾಯಿತು.









