ಎಂ.ಜಿ.ಎಂ. ವಿದ್ಯಾಸಂಸ್ಥೆಯ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ಕೊಡಿಯಾಲಬೈಲು ಮಹಾತ್ಮಗಾಂಧಿ ಮಲ್ನಾಡು ವಿದ್ಯಾಸಂಸ್ಥೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣಾ ಕಾರ್ಯಕ್ರಮ ನಡೆಯಿತು.

ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್ ನ ಅಧ್ಯಕ್ಷರಾದ ಪಿ.ಎಸ್. ಗಂಗಾಧರ್ ಧ್ವಜಾರೋಹಣ ನೆರವೇರಿಸಿ, ಶುಭ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕರಾದ ದೊಡ್ಡಣ್ಣ ಬರೆಮೇಲುರವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಪೋಷಕ ಸಮಿತಿಯ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ ರವರು ಕಾರ್ಯಕ್ರಮದ ಕುರಿತು ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಬೆಳ್ಯಪ್ಪ ಗೌಡ ಮತ್ತು ತಿಮ್ಮಯ್ಯ ಪಿಂಡಿಮನೆ, ಸಂಸ್ಥೆಯ ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕ ವೃಂದದವರು, ಶಿಕ್ಷಕೇತರ ವೃಂದದವರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ಹಿರಿಯ ಶಿಕ್ಷಕಿ ಶ್ರೀಮತಿ ಚಿತ್ರಲೇಖಾರವರು ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಶಿವರಂಜಿನಿ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಅನಿತಾಕುಮಾರಿ ಕಾರ್ಯಕ್ರಮ ನಿರೂಪಿಸಿದರು.