ಬೊಳುಬೈಲ್ : ಪೀಸ್ ಸ್ಕೂಲಿನಲ್ಲಿ ಸ್ವಾತಂತ್ರ್ಯದ ಸಂಭ್ರಮ

0

ಬೊಳುಬೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೀಸ್ ಸ್ಕೂಲ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಕೆ. ಅಬೂಬಕರ್ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಪ್ರಾಂಶುಪಾಲ ಮೊಹಮ್ಮದ್ ಸೈಪುಲ್ಲ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಮಹತ್ವ ವಿವರಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಶಂಸುದ್ದೀನ್ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

ಧ್ವಜಾರೋಹಣದ ನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಸ್ವಾತಂತ್ರ ದಿನಾಚರಣೆಯ ಕುರಿತು ವಸ್ತು ಪ್ರದರ್ಶನವೂ ಕೂಡ ಜರುಗಿತು. ಕಾರ್ಯಕ್ರಮದಲ್ಲಿ ಎಂಟನೇ ತರಗತಿಯ ಇಬ್ರಾಹಿಂ ಖಲೀಲ್ ಕಿರಾತ್ ಪಠಿಸಿದರು.

ವಿದ್ಯಾರ್ಥಿಗಳಾದ ಸಲ್ಮಾ ಮತ್ತು ಸೋನಾ ಕಾರ್ಯಕ್ರಮ ನಿರೂಪಿಸಿದರು.