ಸುಳ್ಯ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ ಕಟ್ಟಡದ ಮುಂಭಾಗದಲ್ಲಿ ಆ.15 ರಂದು ಆಚರಿಸಲಾಯಿತು.

ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಅಧ್ಯಕ್ಷತೆ ವಹಿಸಿದ್ದರು.


ಹಿರಿಯರಾದ ಸುಧಾಕರ ಭಟ್ ರವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗೈದ ವೀರ ಪುರುಷರನ್ನು ಸ್ಮರಿಸಿಕೊಂಡರು.


ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.