ಆಲೆಟ್ಟಿ ಸದಾಶಿವ ದೇವಳದಲ್ಲಿ ಶ್ರೀವರಮಹಾಲಕ್ಷ್ಮಿ ಪೂಜೆ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16 ರಂದು ನಡೆಯಿತು.


ಬೆಳಗ್ಗೆ ಅರ್ಚಕ ಹರ್ಷಿತ್ ಬನ್ನಿಂತಾಯ ರವರ ನೇತೃತ್ವದಲ್ಲಿ ದೇವರಿಗೆ ನಿತ್ಯ ಪೂಜೆಯಾಗಿ ಬಳಿಕ ಪುರೋಹಿತ ವೆಂಕಟೇಶ ಶಾಸ್ತ್ರೀಯ ವರ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ನಡೆಯಿತು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ದೇವಸ್ಥಾನದ ಅನುವಂಶಿಕ ಮೊಕ್ತೇಸರರ ಪೈಕಿ ಶ್ರೀಪತಿ ಬೈಪಡಿತ್ತಾಯ, ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಜೀ.ಸ.ಅಧ್ಯಕ್ಷ ಎನ್.ಎ.ರಾಮಚಂದ್ರ, ವ್ಯ.ಸ.ಮಾಜಿ ಅಧ್ಯಕ್ಷ ಪ್ರಸನ್ನ ಕೆ.ಸಿ.ಬಡ್ಡಡ್ಕ, ಸಮಿತಿ ಸದಸ್ಯರು, ಭಜನಾ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸ್ಥಳೀಯ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.