ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

0


ಸರಕಾರಿ ಪ್ರೌಢಶಾಲೆ ದುಗ್ಗಲಡ್ಕ ದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು . ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಬಿ. ಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಹಶಿಕ್ಷಕಿ ಶೋಭಾ ರವರು ದಿನಾಚರಣೆಯ ಐತಿಹಾಸಿಕ ಮಹತ್ವದ ಬಗ್ಗೆ ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಕುಮಾರ್ ಸಾಂದರ್ಭಿಕವಾಗಿ ಮಾತನಾಡಿ ಶುಭ ಕೋರಿದರು. ನಮ್ಮ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ. ಫರ್ಝಾನ ಅತಿಥಿಗಳಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಹಂತದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ/ ಭಾಗವಹಿಸಿದ ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಟ್ಟರು. ದೈಹಿಕ ಶಿಕ್ಷಣ ಶಿಕ್ಷಕ ವೆಂಕಟ್ರಮಣ ಕೆ ಎಸ್ ಧ್ವಜಾರೋಹಣದ ಸಿದ್ಧತೆ ನಡೆಸಿಕೊಟ್ಟರು.

ಶಾಲಾ ವಿದ್ಯಾರ್ಥಿ ನಾಯಕಿ ಫಾತಿಮತ್ ಜೆಝಿಲಾ ಧ್ವಜ ವಂದನೆ ಕಾರ್ಯ ನಡೆಸಿ ಕೊಟ್ಟರು. ಸಹಶಿಕ್ಷಕ ಉಣ್ಣಿ ಕೃಷ್ಣ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಉದಯ್ ಕುಮಾರ್ ,ಗೀತಾ , ಅಶ್ವಿನಿ ಕುಮಾರಿ , ದೀಪಾ ಶಂಕರಿ ಸಹಕರಿಸಿದರು . ಶಾಲಾ ವಿದ್ಯಾರ್ಥಿಗಳು, ಪೋಷಕರು, ಅಂಗನವಾಡಿ ಪುಟಾಣಿಗಳು, ಅಂಗನವಾಡಿ ಸಿಬ್ಬಂದಿ, ನಮ್ಮ ಕ್ಲಿನಿಕ್ ಸಿಬ್ಬಂದಿ,ಹಾಗೂ ಶಾಲಾ ಅಡುಗೆ ಸಿಬ್ಬಂದಿಯವರು ಭಾಗವಹಿಸಿದರು.