ಜಯನಗರ ಶಾಲಾ ವಿದ್ಯಾರ್ಥಿಗಳಿಗೆ ಪ್ರಣವ್ ಫೌಂಡೇಶನ್ ವತಿಯಿಂದ ಪುಸ್ತಕ ವಿತರಣೆ

0

ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಉತ್ತಮ ಗುಣಮಟ್ಟದ ಜೀವನವನ್ನು ರೂಪಿಸಿಕೊಳ್ಳಬೇಕು: ಭಾಗೀರಥಿ ಮುರುಳ್ಯ

ಜಯನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪ್ರಣವ್ ಪೌಂಡೇಶನ್ ವತಿಯಿಂದ ಪುಸ್ತಕ ಮತ್ತು ಲೇಖನಿ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮ ಆ 18 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪುಸ್ತಕ ವಿತರಣೆ ಮಾಡಿದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಕು. ಭಾಗೀರಥಿ ಮುರುಳ್ಯ ಮಾತನಾಡಿ ‘ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಉತ್ತಮ ಗುಣ ಮಟ್ಟದ ಜೀವನ ರೂಪಿಸಿಕೊಳ್ಳ ಬೇಕು. ಅದನ್ನು ವಿದ್ಯಾರ್ಥಿ ಜೀವನದಲ್ಲಿಯೇ ರೂಢಿಸಿಕ್ಕೊಂಡರೆ ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ,ಸರ್ವರನ್ನು ಸಮಾನವಾಗಿ ಕಾಣುವ,ಮತ್ತು ಅವರೊಂದಿಗೆ ಉತ್ತಮವಾಗಿ ಬೇರೆಯುವ ಅವಕಾಶಗಳು ನಮ್ಮಿಂದ ಆಗಲು ಸಾಧ್ಯವಾಗುತ್ತದೆ. ಆ ರೀತಿ ಒಂದು ಉತ್ತಮ ಸಮಾಜವನ್ನು ನಾವು ನಿರ್ಮಿಸ ಬೇಕು.ಅದಕ್ಕಾಗಿ ನಮ್ಮನ್ನು ಮೂಡಿಪ್ಪಾಗಿಸ ಬೇಕಾಗಿದೆ ಎಂದರು.


ಅಲ್ಲದೆ ಮುಂದಿನ ದಿನಗಳಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರ ಸಹಕಾರ ಮತ್ತು ಶಾಸಕರ ಅನುಧಾನ ದಿಂದ ಈ ಶಾಲೆಗೆ ಅಭಿವೃದ್ಧಿ ಯೋಜನೆಗಳನ್ನು ಮಾಡುವ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಣವ್ ಪೌಡೇಶನ್ ಇದರ ರಾಜ್ಯ ಸಮಿತಿ ಸದಸ್ಯರುಗಳಾದ ಮಹೇಶ್ ರೈ ಮೇನಾಲ, ನ ಪಂ ಸದಸ್ಯರುಗಳಾದ ವಿನಯಕುಮಾರ್ ಕಂದಡ್ಕ, ಶಿಲ್ಪಾ ಸುದೇವ್, ಬಾಲಕೃಷ್ಣ ಭಟ್ ಕೊಡಂಕೇರಿ ಮಾತನಾಡಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರಣವ್ ಪೌಡೇಶನ್ ಸಂಸ್ಥೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮುದ್ದಪ್ಪ,ಪ್ರಣವ್ ಪೌಡೇಶನ್ ಇದರ ಸದಸ್ಯರಾದ ರಾಜೇಶ್ ಮೇನಾಲ, ಶಾಲಾ ನಿವೃತ್ತ ದೈಹಿಕ ಶಿಕ್ಷಕ ತೀರ್ಥರಾಮ ಅಡ್ಕಬಳೆ, ಪತ್ರಕರ್ತ ಹಸೈನಾರ್ ಜಯನಗರ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಸ್ವಾಗತಿಸಿ ಪ್ರಾಸ್ತವಿಕ ಮಾತನಾಡಿ ಶಿಕ್ಷಕರುಗಳಾದ ಅಶ್ವಿನಿ ವಂದಿಸಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ವಿದ್ಯಾರ್ಥಿಗಳು, ಪೋಷಕರು, ಎಸ್ ಡಿ ಎಂ ಸಿ ಸದಸ್ಯರು, ಸ್ಥಳೀಯರು ಭಾಗವಹಿಸಿದ್ದರು.