ಕಾಯರ್ತೋಡಿ ಶ್ರೀ ಮಹಾವಿಷ್ಣು ದೇಗುಲದಲ್ಲಿ ಸೋಣ ಶನಿವಾರದ ಪ್ರಯುಕ್ತ ವಿಶೇಷ ಪೂಜೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬಲಿವಾಡು ಕೂಟದ ಪ್ರಯುಕ್ತ ದೇವರಿಗೆ ವಿಶೇಷ ಸೋಣ ಶನಿವಾರ ಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕ ನೀಲಕಂಠ ಭಟ್ ಅವರ ನೇತೃತ್ವದಲ್ಲಿ ಆ.17ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.