ಅತ್ಯುತ್ತಮ ಯುವಕ, ಯುವತಿ ಮಂಡಲ ಪ್ರಶಸ್ತಿಗೆ ಅರ್ಜಿ ಆಹ್ವಾನ

0

ಸುಳ್ಯ ತಾಲೂಕಿನಲ್ಲಿ ಕಾರ್ಯಚರಿಸುತ್ತಿರುವ ಯುವಜನ ಸಂಯುಕ್ತ ಮಂಡಳಿಯಲ್ಲಿ ನೋಂದಾವಣೆಗೊಂಡಿರುವ ಎಲ್ಲಾ ಯುವಕ ಮತ್ತು ಯುವತಿ ಮಂಡಲದವರಿಗೆ ಅತ್ಯುತ್ತಮ ಪ್ರಶಸ್ತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆದ್ದರಿಂದ ತಮ್ಮ ತಮ್ಮ ಯುವಕ ಮಂಡಲ ಮತ್ತು ಯುವತಿ ಮಂಡಲ ಆಗಸ್ಟ್ 2024 ರವರೆಗೆ ಒಂದು ವರ್ಷದಲ್ಲಿ ನಡೆಸಿರುವ ಕಾರ್ಯ ಚಟುವಟಿಕೆಗಳ ವರದಿಯನ್ನು ಸುಳ್ಯ ಯುವಜನ ಸಂಯುಕ್ತ ಮಂಡಳಿಗೆ ಕಳುಹಿಸ ತಕ್ಕದ್ದು ಎಂದು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ಎ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಕಳುಹಿಸಲು ಕೊನೇ ದಿನಾಂಕ ಇದೇ ಆಗಸ್ಟ್ 31ಆಗಿರುತ್ತದೆ.