ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಹಾರ್ದಿಕ ಕೆರೆಕ್ಕೋಡಿ ತೃತೀಯ

0

ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಚಿಕ್ಕಮಗಳೂರು ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್, ಕೃಷಿ ಯೋಗ ಮಂದಿರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು ಇವರು ಆಯೋಜಿಸಿರುವ 5ನೇ ರಾಜ್ಯ ಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ 2024ರ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ 10 ರಿಂದ 14 ವರ್ಷದ ಬಾಲಕಿಯರ ಆರ್ಟಿಸ್ಟಿಕ್ ವಿಭಾಗದಲ್ಲಿ ಹಾರ್ದಿಕ ಕೆರೆಕ್ಕೋಡಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಕುಶಾಲಪ್ಪ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರಿ. ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಸುಳ್ಯದಲ್ಲಿ ಯೋಗಗುರು ಸಂತೋಷ್ ಮುಂಡಕಜೆ ಹಾಗೂ ಪ್ರಶ್ವಿಜಾ ಸಂತೋಷ್ ಬಳಿ ಮಾರ್ಗದರ್ಶನದಲ್ಲಿ ಯೋಗಭ್ಯಾಸವನ್ನು ಪಡೆಯುತ್ತಿದ್ದಾರೆ.