ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ

0


ಜವಾಹರ ನವೋದಯ ವಿದ್ಯಾಲಯ ಮುಡಿಪು ಇಲ್ಲಿಗೆ 2015-26 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸೆ. 16 ಅರ್ಜಿ ಸಲ್ಲಿಸಲು ಕೊನೆಯ ದಿನ. 2025 ಜ. 18 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ದ.ಕ. ಜಿಲ್ಲೆಯಲ್ಲಿ ಸರಕಾರಿ/ಸರ್ವ ಶಿಕ್ಷ ಅಭಿಯಾನ/ ಸರಕಾರದಿಂದ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಪ್ರಸ್ತುತ 5 ನೇ ತರಗತಿಯಲ್ಲಿ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು. ದಿನಾಂಕ 1-5-2013 ಮತ್ತು 31-7-2015ರ ನಡುವೆ ಜನಿಸಿರಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.