ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೆ.ಪಿ.ಎಸ್ ಪ್ರೌಢಶಾಲೆ ಬೆಳ್ಳಾರೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಾದ ಆಹಿಲ್ ಜೋಸೆಫ್ 10ನೇ, ತನಿಷ್ ದಯಾನಂದ 10ನೇ, ಚೈತನ್ಯ 9ನೇ, ಶಮಂತ್ 8ನೇ, ಜಗನ್ 6ನೇ ತರಗತಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತೇಜಸ್ ಹತ್ತನೇ ತರಗತಿಯ ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ. ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ ಸಹಕರಿಸಿದರು.