ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಅರಿವು ಕಾರ್ಯಕ್ರಮ

0

ಸುಳ್ಯ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಅರಂತೋಡು ವ್ಯಾಪ್ತಿಯ ಅರಂಬೂರು ಉಪ ಕೇಂದ್ರಕ್ಕೆ ಒಳಪಟ್ಟ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ POCSO, ಬಾಲ್ಯವಿವಾಹ, ಸೊಳ್ಳೆ ದಿನಾಚರಣೆ, ಹದಿಹರೆಯದ ಆರೋಗ್ಯ,ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮತ್ತು ಮಾಹಿತಿ ಕಾರ್ಯಕ್ರಮ ಸೈನ್ಸ್ ಕ್ಲಬ್ ವತಿಯಿಂದ ನಡೆಯಿತು.ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿಯಾದ ಶ್ರೀಮತಿ ಪ್ರಮಿಳರವರು ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿದರು.ಸೈನ್ಸ್ ಕ್ಲಬ್ ಸದಸ್ಯರಾದ ಶ್ರೀಮತಿ ಶಾಲಿನಿ, ಶ್ರೀಮತಿ ಬಿಂದು, ಮತ್ತು ಜಿತೇಶ್.G.H ಉಪಸ್ಥಿತರಿದ್ದರು.ಮುಖ್ಯೋಪಾಧ್ಯಯಿನಿ ವೀಣಾ ಶೇಡಿಕಜೆ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು .