ಎಲಿಮಲೆ : ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಸಂಭ್ರಮದ ರಕ್ಷಾ ಬಂಧನ ಆಚರಣೆ

0

ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯಲ್ಲಿ ಆ. 19 ರಂದು ರಕ್ಷಾ ಬಂಧನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಅಧ್ಯಕ್ಷ ಚಂದ್ರಶೇಖರ ಭಟ್ ತಳೂರು ರಕ್ಷಾಬಂಧನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಲಾ ನಿರ್ದೇಶಕ ಮಹಾವೀರ ಜೈನ್, ಶಾಲಾ ಮುಖ್ಯ ಶಿಕ್ಷಕರಾದ ಗದಾಧರ ಬಾಳುಗೋಡು ಹಾಗೂ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳೇ ರಕ್ಷೆಯನ್ನು ಕಟ್ಟಿ ರಕ್ಷಣೆಯನ್ನು ಮಾಡುವ ಹೊಣೆಯನ್ನು ತೆಗೆದುಕೊಂಡರು. ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ಹಂಚಲಾಯಿತು.