ಬೆಳ್ಳಾರೆ ಅಂಗನವಾಡಿಯಲ್ಲಿ ಬೀಳ್ಕೊಡುಗೆ ಮತ್ತು ಸ್ವಾಗತ ಕಾರ್ಯಕ್ರಮ

0

ಬೆಳ್ಳಾರೆ ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾಗಿ 4 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಶ್ರೀಮತಿ ದಿವ್ಯ ರಮೇಶ್ ಪಡ್ಪು ಇವರಿಗೆ ಬೀಳ್ಕೊಡುಗೆ ಮತ್ತು ಬಾಲವಿಕಾಸ ಸಮಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಪ್ಸ ಬಿ. ಯು ಇವರಿಗೆ ಸ್ವಾಗತ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಆ.15 ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್ ರೈ ಇವರ ಅಧ್ಯಕ್ಷತೆಯಲ್ಲಿ ಜರುಗಿತು,ಈ ಸಂದರ್ಭದಲ್ಲಿ ನಿರ್ಗಮನ ಅಧ್ಯಕ್ಷರಾದ ಶ್ರೀಮತಿ ದಿವ್ಯ ರಮೇಶ್ ಪಡ್ಪು ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮತ್ತು ನೂತನ ಅಧ್ಯಕ್ಷರಾದ ಅಪ್ಸ ಬಿ ಯು ಇವರನ್ನು ಸ್ವಾಗತಿಸಲಾಯಿತು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಅಪ್ಸ ಬಿ ಯು ಸ್ವಾಗತಿಸಿ ಅಂಗನವಾಡಿ ಕಾರ್ಯಕರ್ತೆ ಭಾರತಿ.ಕೆ ವಂದಿಸಿ, ಸಂಜಯ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು. ಬಾಲವಿಕಾಸ ಸಮಿತಿ ಸದಸ್ಯರು, ಪೋಷಕರು ಮತ್ತು ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ ಬಸ್ತಿಗುಡ್ಡೆ ಸಹಕರಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಸದಸ್ಯರು ಮತ್ತು ಸ್ನೇಹಶ್ರೀ ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.