ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 12 ನೇ ವರ್ಷದ ಭಾವಪೂರ್ಣ ಪುಣ್ಯಸ್ಮರಣೆ

0

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯ, ಇಲ್ಲಿಆ. 22 ರಂದು ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 12 ನೇ ವರ್ಷದ ಭಾವಪೂರ್ಣ ಪುಣ್ಯಸ್ಮರಣೆ ನಡೆಯಿತು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ದೀಪ ಬೆಳಗಿಸಿ ಪುಪ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಭಾಗ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಭಾವಚಿತ್ರಕ್ಕೆ ಹೂ ಹಾರ ಹಾಕಿ ನಮಿಸಿ, ಪುಣ್ಯಸ್ಮರಣೆ ಮಾಡಿ ಅವರ ಆದರ್ಶಗಳನ್ನು ಸ್ಮರಿಸಿದರು.