ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜಾನಕಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ

0

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 12ನೇ ಪುಣ್ಯತಿಥಿಯ ಅಂಗವಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಿ. ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಅಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಸಿ ರಾಮಚಂದ್ರ ಭಟ್, ಮುಖ್ಯ ಹಣಕಾಸು ಅಧಿಕಾರಿ ಧನಂಜಯ ಮದುವೆಗದ್ದೆ, ಡಾ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಉಪಸ್ಥಿತರಿದ್ದು ದಿ. ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.