ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ನೂತನ ರಾಜಗೋಪುರಕ್ಕೆ ದಾರಂದ ಮುಹೂರ್ತ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಅಂದಾಜು 50 ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರಾಜಗೋಪುರ ಕಟ್ಟಡಕ್ಕೆ ದಾರಂದ ಮುಹೂರ್ತ ಕಾರ್ಯಕ್ರಮವು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ಆ.22ರಂದು ಬೆಳಿಗ್ಗೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು, ಮಾಜಿ ಮೊಕ್ತೇಸರರುಗಳು, ದೇವತಕ್ಕರು, ತಕ್ಕಮುಖ್ಯಸ್ಥರುಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.