ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ಸನ್ನಿಧಿಯಲ್ಲಿ ಶ್ರಾವಣ ಮಾಸದ ಎರಡನೇ ಶನಿವಾರದ ಪ್ರಯುಕ್ತ ಬಲಿವಾಡುಕೂಟವು ಆ.24ರಂದು ನಡೆಯಿತು.
ಶ್ರೀ ಸುಬ್ರಹ್ಮಣ್ಯ ದೇವರಿಗೆ ದೇಗುಲದ ಪ್ರಧಾನ ಅರ್ಚಕ ಶ್ರೀವರ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ನೂರಾರು ಮಂದಿ ಭಕ್ತಾದಿಗಳು ಆಗಮಿಸಿ, ಶ್ರೀ ದೇವರ ಪ್ರಸಾದ ಭೋಜನ ಸ್ವೀಕರಿಸಿದರು.
ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರುಗಳು, ಸದಸ್ಯರುಗಳು , ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು , ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.