ಅರಂತೋಡು : ಸ್ವಚ್ಛತಾ ಅಭಿಯಾನ

0

ಅರಂತೋಡು ಗ್ರಾಮ ಪಂಚಾಯತ್ ನ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಇಂದು ಅರಂತೋಡು ಪೇಟೆಯಲ್ಲಿ ನಡೆಯಿತು. ಸ್ವಚ್ಛತಾ ಅಭಿಯಾನದಲ್ಲಿ ಅರಂತೋಡು -ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸಂಘ -ಸಂಸ್ಥೆಗಳ ಪ್ರತಿನಿಧಿಗಳು ಅರಂತೋಡು ಪರಿಸರದ ನಾಗರಿಕರು ಹಾಗೂ ಸ್ವಚ್ಛತಾ ಘಟಕದ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.