ಬಾಳಿಲದ ಕೊಡೆಂಕಿರಿಯಲ್ಲಿ ಮೊಸರು ಕುಡಿಕೆ ಕಾರ್ಯಕ್ರಮ

0

ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿ ಕೊಡೆಂಕಿರಿ, ಮರೆಂಗಾಲ ಇದರ ಆಶ್ರಯದಲ್ಲಿ 16ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಆ. 26ರಂದು ನಡೆಯಲಿದೆ. ಬೆಳಿಗ್ಗೆ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ಹೆಗ್ಡೆ ಪರಮೇಶ್ವರಯ್ಯ ಕಾಂಚೋಡು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಬಾಳಿಲ ವಿದ್ಯಾಬೋಧಿನೀ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಯು. ರಾಧಾಕೃಷ್ಣ ರಾವ್ ಭಾಗವಹಿಸಿದ್ದರು. ಶ್ರೀಕೃಷ್ಣ ಸೇವಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಮರೆಂಗಾಲ, ಕಾರ್ಯದರ್ಶಿ ನಾಗರಾಜ, ಕೋಶಾಧಿಕಾರಿಯಾಗಿ ನವೀನ್ ಎಂ ಮತ್ತು ರಾಜೇಶ್ ನಾಯ್ಕ್ ದೇರಂಪಾಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಬಳಿಕ ಮಕ್ಕಳಿಗೆ, ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಸಂಜೆ 6.00 ಗಂಟೆಗೆ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಮರೆಂಗಾಲರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ರಾತ್ರಿ 7.30ರಿಂದ ಡಾನ್ಸ್ & ಬೀಟ್ಸ್ ಮತ್ತು ಇತರ ಶಾಖೆಗಳ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.